ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಹೆಚ್.ಸಿ ಮಹದೇವಪ್ಪ ಅವರು ಮೈಸೂರು ದಸರಾ ಪೋಸ್ಟರ್ ಮತ್ತು ವೆಬ್ ಸೈಟ್‌ನ್ನು ಬಿಡುಗಡೆ ಮಾಡಿದರು.
ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅ.15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.
ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…