ಮೈಸೂರು

ಮೈಸೂರು ದಸರಾ 2023 : ಪೋಸ್ಟರ್-ವೆಬ್‌ಸೈಟ್ ಬಿಡುಗಡೆ

ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಹೆಚ್.ಸಿ ಮಹದೇವಪ್ಪ ಅವರು ಮೈಸೂರು ದಸರಾ ಪೋಸ್ಟರ್ ಮತ್ತು ವೆಬ್ ಸೈಟ್‌ನ್ನು ಬಿಡುಗಡೆ ಮಾಡಿದರು.

ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅ.15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

lokesh

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

4 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

5 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

8 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

8 hours ago