ಮೈಸೂರು

ಮೈಸೂರು ದಸರಾ-2023 : ಮೊದಲ ಹಂತದಲ್ಲಿ ಅರಮನೆಗೆ ಬರುವ ಗಜಪಡೆಯ ಪಟ್ಟಿ ಸಿದ್ದ

ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ.

ನಿನ್ನೆ ಅರಣ್ಯಧಿಕಾರಿಗಳು ಸಭೆ ನಡೆಸಿ ಆನೆಗಳ ಪಟ್ಟಿ ಫೈನಲ್ ಮಾಡಿದ್ದು, ಮತ್ತೊಂದು ಸಭೆ ನಡೆಸಿ ಎರಡನೇ ಪಟ್ಟಿ ತಯಾರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 1ರಂದು ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿವೆ.

ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಗಜ ಪಡೆ ಆಗಮಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಗುತ್ತದೆ. ಇನ್ನು ಈ ಬಾರಿ 14 ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ಆಗಮಿಸುತ್ತಿದ್ದು, ಹುಣಸೂರು ತಾಲ್ಲೂಕಿನ ವೀರನ ಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್​ಸಿ ಮಹದೇವಪ್ಪ ಕೆಳದಿನಗಳ ಹಿಂದೆ ಹೇಳಿದ್ದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago