ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ.
ನಿನ್ನೆ ಅರಣ್ಯಧಿಕಾರಿಗಳು ಸಭೆ ನಡೆಸಿ ಆನೆಗಳ ಪಟ್ಟಿ ಫೈನಲ್ ಮಾಡಿದ್ದು, ಮತ್ತೊಂದು ಸಭೆ ನಡೆಸಿ ಎರಡನೇ ಪಟ್ಟಿ ತಯಾರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 1ರಂದು ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿವೆ.
ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಗಜ ಪಡೆ ಆಗಮಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಗುತ್ತದೆ. ಇನ್ನು ಈ ಬಾರಿ 14 ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ಆಗಮಿಸುತ್ತಿದ್ದು, ಹುಣಸೂರು ತಾಲ್ಲೂಕಿನ ವೀರನ ಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ಸಿ ಮಹದೇವಪ್ಪ ಕೆಳದಿನಗಳ ಹಿಂದೆ ಹೇಳಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…