ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ಶುಕ್ರವಾರ (ಆ.23) ವಿದ್ಯುಕ್ತವಾಗಿ ಸ್ವಾಗತ ಕೋರಿದರು.
ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 ರ ಶುಭಗಳಿಗೆಯಲ್ಲಿ ಅರಮನೆಗೆ ಗಜಪಡೆ ಆಗಮನವಾಯಿತು. ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅದ್ಧೂರಿ ಸ್ವಾಗತಿಸಲಾಯಿತು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಶ್ರೀವತ್ಸಾ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…