ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.
ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ ಯತೀಂದ್ರ ಎಸ್, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿದ ಅವರು, ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಆಹ್ವಾನ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿದ ಮೈಸೂರು ಜಿಲ್ಲಾಡಳಿತ ಅವರಿಗೆ ಅಧಿಕೃತ ಆಹ್ವಾನ ನೀಡಿತು.
ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪನ ಅವರ ಸ್ವಗೃಹಕ್ಕೆ ತೆರಳಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ನಿಯೋಗವು ಮೈಸೂರು ದಸರಾಗೆ ಗೌರವಪೂರ್ವಕವಾಗಿ ಅಧಿಕೃತವಾಗಿ ಆಮಂತ್ರಣ ನೀಡಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…