ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ ಉಹಾರ ಬಡಿಸುವ ಮೂಲಕ ಶುಭಹಾರೈಸಿದರು.
ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಶುಕ್ರವಾರ ಹಾಕಲಾಗಿದ್ದ ಪೆಂಡಾಲ್ ನಲ್ಲಿ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಇಡ್ಲಿ, ವಡೆ,ಚಟ್ನಿ, ಮಸಾಲೆ ದೋಸೆ, ಪೊಂಗಲ್, ಕೇಸರಿ ಬಾತ್, ಹೋಳಿಗೆ ಉಪ್ಪಿಟ್ಟನ್ನು ಬಡಿಸಲಾಯಿತು.
ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಿಂದು ಮಾವುತ, ಕಾವಾಡಿಗಳು,ಮಕ್ಕಳು, ಸಂತಸ ಪಟ್ಟರು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ಸೆ.1 ರಂದು ಅರಮನೆಗೆ ದಸರಾ ಗಜಪಡೆಗಳ ಮೊದಲ ತಂಡ ಆಗಮಿಸಿತ್ತು. ಎರಡನೇ ತಂಡ ಸೆ.25 ರಂದು ಆಗಮಿಸಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಅತಮನೆ ಮಂಡಳಿ ವತಿಯಿಂದ ಉಪಹಾರ ವ್ಯವಸ್ಥೆ ಮಾಡಿಕೊಂಡು ಬಂದಿರುವ ಮಾದರಿಯಲ್ಲಿ ಈ ವರ್ಷವೂ ಸಹ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…