ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಅಧ್ಯಕ್ಷರ ಸ್ಥಾನಕ್ಕೆ ಅಕ್ಟೋಬರ್ 23ಕ್ಕೆ ಚುನಾವಣೆ ನಡೆಯಲಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು.
ದಸರಾ ವಸ್ತು ಪ್ರದರ್ಶನದಲ್ಲಿನ ನಂದಿನಿ ಕುಟೀರ ಮಳಿಗೆಗೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವೆಂಕಟೇಶ್, ಮೈಮುಲ್ ಅಧ್ಯಕ್ಷರಾಗಿದ್ದ ಚೆಲುವರಾಜು ಅವರ ರಾಜೀನಾಮೆಯಿಂದ ಅಧಕ್ಷ ಸ್ಥಾನದ ಹುದ್ದೆ ಖಾಲಿ ಇದ್ದು, ಅದಕ್ಕೆ ಅ.23ರಂದು ಚುನಾವಣೆ ನಡೆಸಲಾಗುವುದು, ಎಂದು ಹೇಳಿದರು.
ಹಾಲಿನ ದರ ಹೆಚ್ಚಳ ಕುರಿತು ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಸದ್ಯಕ್ಕೆ ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಅಷ್ಟಕ್ಕೂ ಎರಡು ತಿಂಗಳ ಹಿಂದ ನಾಲ್ಕು ರೂ. ಹೆಚ್ಚಳ ಮಾಡಿದ್ದೇವೆ ಎಂದರು.
ಇದನ್ನು ಓದಿ: ಮೈಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಿದ್ಧತೆ
ಬಿಜೆಪಿ ಅವಧಿಯಲ್ಲಿ ಬಾಕಿ ಉಳಿಸಿಕೊಂಡಿದ್ದ 700 ಕೋಟಿ ರೂ. ಗಳ ಹಾಲಿನ ಪ್ರೋತ್ಸಾಹಧನವನ್ನು ನಮ್ಮ ಅವಧಿಯಲ್ಲಿ ನೀಡಿದ್ದೇವೆ. ಮಾತ್ರವಲ್ಲದೆ, ಜುಲೈವರೆಗೂ ಈಗಾಗಲೇ ನೀಡಿದ್ದು, ಆಯಾ ತಿಂಗಳ ಪ್ರೋತ್ಸಾಹಧನ ಆಯಾ ತಿಂಗಳೇ ವಿತರಿಸುವ ಬಗ್ಗೆಯೂ ಕ್ರಮವಹಿಸಲಾಗಿದೆ ಮ್ಯಾಟ್, ಮೇವು ಕಟಾವು ಯಂತ್ರವನ್ನು ಬೇಡಿಕೆಗೆ ಅನುಗುಣವಾಗಿ ವಿತರಿಸಲಾಗುತ್ತದೆ. ಎಲ್ಲ ರೈತರಿಗೂ ಏಕಕಾಲಕ್ಕೆ ಕೊಡಲು ಸಾಧ್ಯವಿಲ್ಲ. ಪ್ರತಿ ವರ್ಷ ಯಾರಿಗೆ ಸಿಕ್ಕಿಲ್ಲ ಅಂತವರಿಗೆ ಕೊಡುವ ಕೆಲಸವನ್ನು ಇಲಾಖೆ ಮಾಡಲಿದೆ,” ಎಂದು ತಿಳಿಸಿದರು.
ಮೈಸೂರು ನಗರದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರವಾಗಿ ನಗರ ಪೊಲೀಸ್ ಆಯುಕ್ತರನ್ನು ಕೇಳಬೇಕು ಎಂದರು.
ಈ ಬಗ್ಗೆ ಸರ್ಕಾರದ ಮೇಲೆ ಸಂಸದರ ಆರೋಪ ಕುರಿತು ಮಾತನಾಡಿ, ಬಿಜೆಪಿ ನಾವು ಮಾಡುವ ಒಳ್ಳೆಯ ಅಂಶಗಳನ್ನು ನೋಡುವುದಿಲ್ಲ. ಎಲ್ಲದರಲ್ಲೂ ಬೇಡವಾದುದನ್ನೇ ನೋಡುತ್ತಾ ಆಪಾದನೆ ಮಾಡುವುದೇ ಅವರ ಕೆಲಸವಾಗಿದೆ, ಎಂದರು.
ಈ ವೇಳೆ ಮೈಮುಲ್ ನಿರ್ದೇಶಕ ಎ.ಟಿ. ಸೋಮಶೇಖರ್, ಕೆ.ಜಿ.ಮಹೇಶ್, ಆರ್.ಚೆಲುವರಾಜು, ಕೆ.ಉಮಾಶಂಕರ್, ಓಂ.ಪ್ರಕಾಶ್, ಬಿ.ಗುರುಸ್ವಾಮಿ, ಬಿ.ಎ.ಪ್ರಕಾಶ್, ಪಿ.ಎಂ.ಪ್ರಸನ್ನ, ಕೆ.ಈರೇಗೌಡ, ಕೆ.ಎಸ್.ಕುಮಾರ್, ದಾಕ್ಷಾಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ. ನಾಗರಾಜು, ಸದಾನಂದ, ಎ.ಬಿ.ಮಲ್ಲಿಕಾ ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಬಿ.ಎನ್. ರವಿಕುಮಾರ್, ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಸುರೇಶ್ ನಾಯ್ ಉಪಸ್ಥಿತರಿದ್ದರು.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…