ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ)ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.