ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ : ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಕೊಲೆ ಆರೋಪಿ. ಎರಡು ವರ್ಷ ಜೈಲಿನಲ್ಲಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಆರೋಪಿ ಕಾರ್ತಿಕ್ ಊರು ಸೇರದೆ, ಮಧ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.
ಇದೀಗ ಸಿಸಿಟಿವಿ ದೃಶ್ಯಾವಳಿ ಆಧರಿಸಿದ ಪೊಲೀಸರು ಆರೋಪಿಯನ್ನ ಪತ್ತೆಹಚ್ಚಿದ್ದಾರೆ. ಬಲೂನ್ ಮಾರಲು ಕುಟುಂಬದ ಜೊತೆ ಬಂದಿದ್ದ 10 ವರ್ಷದ ಬಾಲಕಿಯ ಶವ ದೊಡ್ಡಕೆರೆ ಮೈದಾನದ ಬಳಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.





