ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಬಿಳಗೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ. ನವೆಂಬರ್.20 ರಂದು ಗ್ರಾಮಸ್ಥನಾದ ಸಿದ್ದರಾಜು ಅವರು ತಮ್ಮ ಮಗಳನ್ನು ಆಂಗನವಾಡಿಯಿಂದ ಕರೆತರಲು ಬಂದಾಗ ಶಾಲೆಯ ಮಕ್ಕಳು ಸಂಪಿನಿಂದ ನೀರೆತ್ತುತ್ತಿರುವ ದೃಶ್ಯ ಕಂಡು ಬಂದಿದೆ.
ನಾನು ಶಾಲಾ ಆವರಣದಲ್ಲಿರುವ ಸಂಪಿನಿಂದ ಮಕ್ಕಳು ನೀರು ಎಳೆಯುತ್ತಿರುವುದನ್ನು ಕಂಡೆ. ಮೊದಲಿಗೆ ಯಾರಾದರೂ ಒಳಗೆ ಬಿದ್ದಿರಬಹುದೆಂದು ಭಾವಿಸಿದೆ. ವಿಚಾರಿಸಿದಾಗ, ಶಿಕ್ಷಕರು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನೀರು ತರುವಂತೆ ಹೇಳಿದ್ದಾಗಿ ಮಕ್ಕಳು ಹೇಳಿದರು. ನಾನು ಈ ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಎಜ್ಯುಕೇಶನ್ ಆಫೀಸರ್ (BEO) ಅವರಿಗೆ ದೂರು ನೀಡಿದೆ. BEO ಅವರ ನಿರ್ದೇಶನದಂತೆ ನಂತರ ಲಿಖಿತ ದೂರನ್ನು ಕೂಡ ಸಲ್ಲಿಸಿದೆ. ವಿಡಿಯೋ ಮತ್ತು ದೂರು ಎರಡನ್ನೂ ಡಿಡಿಪಿಐಗೆ ಕಳುಹಿಸಲಾಗುವುದು ಎಂದು ಅವರು ಭರವಸೆ ನೀಡಿದರು ಎಂದು ಸಿದ್ದರಾಜು ಹೇಳಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…