ಮೈಸೂರು

ಮೈಸೂರು ಪರಂಪರೆ – ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಡಿಸಿ ಸೂಚನೆ

ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.

ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನ್ ರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್‌ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago