Mysore
23
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಶ್ರೀಗಳು ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಹೊಸ ಮಠಕ್ಕೆ ಆಗಮಿಸಿದ ಸುತ್ತೂರು ಶ್ರೀಗಳು ಚಿದಾನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಸುದ್ದಿ ತಿಳಿಯುತ್ತಿದ್ದಂತೆ ಹೊಸ ಮಠಕ್ಕೆ ದೌಡಾಯಿಸುತ್ತಿರುವ ಭಕ್ತರು ಮಠದ ಮುಂಭಾಗ ನಿಂತು ಸ್ವಾಮೀಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ.

Tags:
error: Content is protected !!