ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ ಕುರಿ ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಉರಗಪ್ರೇಮಿ ಸಂಜಯ್ ಪಾಟೀಲ್ ಅವರು ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.





