ಮೈಸೂರು : ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುಲಿ ಮತ್ತು ಆನೆ ದಾಳಿ ಹೆಚ್ಚಾಗಿದ್ದು, ಮಾವನ ಮತ್ತು ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು ಎಂಬುದು ಜನರ ಕೂಗಾಗಿದೆ.
ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ ಸೇರಿದಂತೆ ಕಾಡಂಚಿನ ಊರುಗಳಲ್ಲಿ ನಿರಂತರವಾಗಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಲೇ ಇರುತ್ತದೆ. ಇದರಲ್ಲಿ ಪ್ರಾಣಿಗಳ ಸಾವಿಗಿಂತ ಮಾನವರ ಸಾವಿನ ಸಂಖ್ಯೆಯೇ ಹೆಚ್ಚಾಗಿದೆ. ಆದರೆ ಘನವೆತ್ತ ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ತೆಗೆದುಕೊಂಡ ಕ್ರಮಗಳು ಮತ್ತು ಯೋಜನೆಗಳು ಯಾವುವು ಎಂಬುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.
ಕಳೆದ ನಾಲ್ಕು ತಿಂಗಳಿನಿಂದ ನಡೆದಿರುವ ಮಾನವ ಮತ್ತು ಪ್ರಾಣಿ ಸಂಘರ್ಷ ನಡುವಿನ ಪ್ರಮುಖ ದಾಳಿಗಳ ಕುರಿತ ಮಾಹಿತಿ ಇಲ್ಲಿದೆ.
ಹುಲಿ/ಮಾನವ ಸಂಘರ್ಷ
ನವೆಂಬರ್.೨೪ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ಮಹಿಳೆ ರತ್ನಮ್ಮ ಹುಲಿ ದಾಳಿಗೆ ತುತ್ತಾಗಿದ್ದರು.
ನವೆಂಬರ್.೦೮ ಸರಗೂರು ತಾಲೂಕಿನ ಕಾಡಬೇಗೂರು ಗ್ರಾಮದ, ಗ್ರಾ.ಪಂ ಸದಸ್ಯ ಬಾಲಾಜಿ ನಾಯ್ಕ ಹುಲಿ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಅಕ್ಟೋಬರ್.೦೩ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ರೈತ ಗಣೇಶ್ ಹುಲಿ ದಾಳಿಗೆ ಬಲಿ.
ಅಕ್ಟೋಬರ್.೩೧ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವನಗರದಲ್ಲಿ ಹುಲಿ ದಾಳಿಗೆ ಹಸು ಬಲಿ, ದನಗಾಹಿ ವೀರಭದ್ರ ಹುಲಿ ದಾಳಿಯಿಂದ ಗಾಯಗೊಂಡಿದ್ದರು.
ಸೆಪ್ಟೆಂಬರ್.೨೨ ಪಿರಿಯಾಪಟ್ಟಣ ತಾಲೂಕಿನ ಮುದ್ದನಹಳ್ಳಿ ಕೊಪ್ಪಲು ಗ್ರಾಮದ ರಮೇಶ್ ಹುಲಿ ದಾಳಿಯಿಂದ ಗಾಯಗೊಂಡಿದ್ದರು.
ಸೆಪ್ಟೆಂಬರ್.೦೪ ಎಚ್‌ಡಿ ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದ ಬಾಲಕ ಚರಣ್ ಹುಲಿ ದಾಳಿಗೆ ತುತ್ತಾಗಿದ್ದಾನೆ.
ಆನೆ/ಮಾನವ ಸಂಘರ್ಷ
ನವೆಂಬರ್.೨೦ ಮಂಡ್ಯ ತಾಲೂಕಿನ ಲಾಳನಕೆರೆಯ ಸಾಕಮ್ಮ ಎಂಬುವವರು ಆನೆ ದಾಳಿಯಿಂದ ಮೃತರಾಗಿದ್ದಾರೆ.
ಸೆಪ್ಟೆಂಬರ್.೦೨ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ಸಿದ್ದರಾಜ ನಾಯ್ಕ ಎಂಬುವವರ ಮೇಲೆ ಆನೆ ಗಂಭೀರವಾಗಿ ದಾಳಿ ಮಾಡಿತ್ತು.
ಆಗಸ್ಟ್.೧೪ ಮಡಿಕೇರಿಯ ಅರೆಕೋಡು ಗ್ರಾಮದ ನಿವಾಸಿ ಕಟ್ಟೇಮಾಡು ದೇವಪ್ಪ ಆನೆ ದಾಳಿಗೆ ಬಲಿ.
ಆಗಸ್ಟ್.೨೫ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಡಿನಾಡೂರು ಗ್ರಾಮದಲ್ಲಿ ಈರಪ್ಪ ಆನೆ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದರು.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…