ಮೈಸೂರು

ಮೈಸೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ

ಮೈಸೂರು:  ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.

ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡಗಳನ್ನು ತಡೆಗಟ್ಟಲು, ಕಟ್ಟಡದಲ್ಲಿ ಅಗ್ನಿ ನಿರೋಧಕ ವ್ಯವಸ್ಥೆಗಳಾದ ಹೈಡ್ರೆಂಟ್, ಹೋಜ್‌ರೀಲ್, ಪ್ರತ್ಯೇಕ ನೀರು ಸಂಗ್ರಹಣೆ ತೊಟ್ಟಿ, ಫೈರ್‌ ಅಲರಾಮ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ, ಒಂದೆಡೆ ಸುರಕ್ಷಿತವಾಗಿ ಸೇರಲು ಅಗ್ನಿ ಸುರಕ್ಷಿತ ಸ್ಥಳಗಳನ್ನು ಗುರುತಿಸಲಾಗಿದೆ. ಅಗ್ನಿ ಅವಘಡಗಳಲ್ಲಿ ಹೋರಾಡುವ ಬಗ್ಗೆ ಅಗ್ನಿ ನಿರೋಧಕಗಳನ್ನು ಬಳಸುವ ಬಗ್ಗೆ, ಮಾಹಿತಿ ಶಿಕ್ಷಣ, ಸಂಪರ್ಕ ಸೂಚನಾ ಫಲಕ ಅಳವಡಿಸಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೆ ಅಗ್ನಿ ಅನಾಹುತಗಳನ್ನು ತಡೆಗಟ್ಟಲು ಹಾಗೂ ವಿವಿಧ ರೀತಿಯ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತಂತೆ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದ್ದು, ಆಸ್ಪತ್ರೆಯ ಹಂತದಲ್ಲಿ ಅಗ್ನಿಶಾಮಕ ತಂಡವನ್ನು ರಚಿಸಲಾಗಿದೆ.

ಮೈಸೂರು ಜಿಲ್ಲೆಯ 6 ತಾಲ್ಲೂಕು ಆಸ್ಪತ್ರೆಗಳಲ್ಲಿ, ನಂಜನಗೂಡು, ಹೆಚ್.ಡಿ.ಕೋಟೆ, ಕೆ.ಆರ್‌ನಗರ, ಟಿ.ನರಸಿಪುರ ಆಸ್ಪತ್ರೆಗಳಲ್ಲಿ ಹಾಗೂ 9 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸುವ ಕುರಿತಂತೆ ಮುನ್ನೆಚರಿಕೆ ಕ್ರಮವಾಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಂದ ಅಗ್ನಿದುರಂತಗಳ ಪರಿಶೀಲನೆ (ಆಡಿಟ್) ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತಂತೆ ವರದಿ ಪಡೆಯಲಾಗಿದೆ. 146 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವ ಕುರಿತಂತೆ, ಆಸ್ಪತ್ರೆಯ ಎಲ್ಲಾ ವಿಭಾಗ ಮತ್ತು ರೋಗಿ ಆರೈಕೆ ವಿಭಾಗಗಳಲ್ಲಿ ಹಾಗೂ ತುರ್ತು ನಿರ್ವಾಹಣ ಘಟಕಗಳು, ಶಸ್ತçಚಿಕಿತ್ಸಾ ವಿಭಾಗ, ಒಳ ಮತ್ತು ಹೊರ ರೋಗಿ ವಿಭಾಗಗಳಲ್ಲಿ, ಎ.ಬಿ.ಸಿ ಪ್ರಕಾರದ ಅಗ್ನಿ ನಿರೋಧಕಗಳನ್ನು ಅಳವಡಿಸಲಾಗಿದೆ.

ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಕ್ರಮಗಳ ಕುರಿತಂತೆ, ಕೆಪಿಎಂಇ ನಿಯಮಗಳ ಅಡಿಯಲ್ಲಿ ಸಂಸ್ಥೆಗಳು ಪರವಾನಿಗೆ ಪತ್ರ ಪಡೆಯುವ ಮುನ್ನ ಮತ್ತು ಪರವಾನಿಗೆ ನವೀಕರಿಸುವ ಸಮಯದಲ್ಲೇ, ಅಗ್ನಿ ಸುರಕ್ಷತ ಕ್ರಮಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಕೆಪಿಎಂಇ ತಂಡವು ಮೇಲ್ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡ ನಂತರವೇ ಪರವಾನಿಗೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago