ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿತು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಇಂಟಾಚ್ ತಂಡ ಗುರುವಾರ ಮೈಸೂರಿಗೆ ಆಗಮಿಸಿ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿತು. ಇಂಟಾಚ್ ತಂಡದ ರಘುನಾಥ್ ಅವರ ನೇತೃತ್ವದಲ್ಲಿ ಮನೀಷ್, ಸಿದ್ದಾರ್ಥ, ಜೀತಾ, ಅಮೃತಾ ಅವರು ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರು.
ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿರುವ ಪ್ರದೇಶ, ದುಸ್ಥಿತಿಯಲ್ಲಿರುವ ಮಳಿಗೆಗಳು, ಹಣ್ಣು ಅಂಗಡಿಗಳ ಮಾರ್ಗ, ತರಕಾರಿ ಮಳಿಗೆಗಳ ಮಾರ್ಗ ಇನ್ನಿತರೆ ಮಳಿಗೆಗಳ ವಿಡಿಯೋ ಹಾಗೂ ಫೊಟೋಗಳನ್ನು ಕ್ಲಿಕ್ಕಿಸಿಕೊಂಡರು. ಕಳೆದ ವಾರವೂ ಲ್ಯಾನ್ಸ್‌ಡೌನ್ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿದ್ದ ಇಂಟಾಚ್ ತಂಡ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಲಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…