ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ.
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು ಅಧಿಕಾರಿಯಾಗಿರುವ ಖಾದರ್ ಪಾಷ ಅವರನ್ನು ಆಡಾಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಿಷನಲ್ ಡೈರಕ್ಟರ್ ಪ್ರಾದೇಶಿಕ ಕಚೇರಿ ಮೈಸೂರು. ಇಲ್ಲಿಗೆ ಸ್ವಂತ ವೇತನ ಶ್ರೇಣಿ ಮೇಲೆ ವರ್ಗಾಯಿಸಿ ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ ನ.10 ರಂದು ಆದೇಶ ಹೊರಡಿಸಿದ್ದಾರೆ.
ವಿಪರ್ಯಾಸವೆಂದರೆ, ಈ ಹುದ್ದೆಯಲ್ಲಿ ಈಗಾಗಲೇ ಹಾಲಿ ಸಿದ್ದರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಹುದ್ದೆ ಖಾಲಿ ಇಲ್ಲ. ಜತೆಗೆ ಸಿದ್ದರಾಜು ಅವರನ್ನು ವರ್ಗಾಯಿಸಿರುವ ಬಗೆಗೂ ಆದೇಶದಲ್ಲಿ ಸ್ಪಷ್ಟ ಮಾಹಿತಿ ಇಲ್ಲ. ಇದು ಗೊಂದಲಕ್ಕೆ ಎಡೆಮಾಡಿದೆ.
ಪ್ರಮುಖವಾಗಿ, ಈ ಹಿಂದೆ (ಖಾದರ್ ಪಾಷ ಅವರ ಅವಧಿ ಸೇರಿದಂತೆ ) ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕೇಳಿ ಬಂದಿದ್ದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಖರ್ಚು, ವೆಚ್ಚದ ಬಗ್ಗೆ ಆಡಿಟ್ ನಡೆಸಲು ಸಿದ್ದರಾಜು ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅದೇ ಹುದ್ದೆಗೆ ಆರೋಪ ಕೇಳಿ ಬಂದಿದ್ದ ಖಾದರ್ ಪಾಷ ಅವರನ್ನೇ ನೇಮಿಸಿ ಸರಕಾರ ಆದೇಶ ಹೊರಡಿಸಿರುವುದು (ಅದು ಖಾಲಿ ಇಲ್ಲದ ಹುದ್ದೆಗೆ) ಆಶ್ಚರ್ಯಕ್ಕೆ ಎಡೆಮಾಡಿದೆ.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…