ಮೈಸೂರು

ಗೊಂದಲಕ್ಕೆ ಎಡೆಮಾಡಿಕೊಟ್ಟಿರುವ ಕೆ ಎಸ್‌ ಒ ಯು ಹಣಕಾಸು ಅಧಿಕಾರಿ ವರ್ಗಾವಣೆ

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ.

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು ಅಧಿಕಾರಿಯಾಗಿರುವ ಖಾದರ್ ಪಾಷ ಅವರನ್ನು ಆಡಾಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಿಷನಲ್ ಡೈರಕ್ಟರ್  ಪ್ರಾದೇಶಿಕ ಕಚೇರಿ  ಮೈಸೂರು. ಇಲ್ಲಿಗೆ ಸ್ವಂತ ವೇತನ ಶ್ರೇಣಿ ಮೇಲೆ ವರ್ಗಾಯಿಸಿ ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ  ನ.10 ರಂದು ಆದೇಶ ಹೊರಡಿಸಿದ್ದಾರೆ.

ವಿಪರ್ಯಾಸವೆಂದರೆ, ಈ ಹುದ್ದೆಯಲ್ಲಿ ಈಗಾಗಲೇ ಹಾಲಿ ಸಿದ್ದರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಹುದ್ದೆ ಖಾಲಿ ಇಲ್ಲ. ಜತೆಗೆ ಸಿದ್ದರಾಜು ಅವರನ್ನು ವರ್ಗಾಯಿಸಿರುವ ಬಗೆಗೂ ಆದೇಶದಲ್ಲಿ ಸ್ಪಷ್ಟ ಮಾಹಿತಿ ಇಲ್ಲ. ಇದು ಗೊಂದಲಕ್ಕೆ ಎಡೆಮಾಡಿದೆ.

ಪ್ರಮುಖವಾಗಿ, ಈ ಹಿಂದೆ (ಖಾದರ್ ಪಾಷ ಅವರ ಅವಧಿ ಸೇರಿದಂತೆ ) ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕೇಳಿ ಬಂದಿದ್ದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಖರ್ಚು, ವೆಚ್ಚದ ಬಗ್ಗೆ ಆಡಿಟ್ ನಡೆಸಲು ಸಿದ್ದರಾಜು ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅದೇ ಹುದ್ದೆಗೆ ಆರೋಪ ಕೇಳಿ ಬಂದಿದ್ದ ಖಾದರ್ ಪಾಷ ಅವರನ್ನೇ ನೇಮಿಸಿ ಸರಕಾರ ಆದೇಶ ಹೊರಡಿಸಿರುವುದು (ಅದು ಖಾಲಿ ಇಲ್ಲದ ಹುದ್ದೆಗೆ) ಆಶ್ಚರ್ಯಕ್ಕೆ ಎಡೆಮಾಡಿದೆ.

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago