ಮೈಸೂರು

ಮೈಸೂರು | ಮಂಕಿ ಕ್ಯಾಪ್‌ ಧರಿಸಿ ಚಿನ್ನ, ನಗದು ದೋಚಿದ ಖದೀಮರು

ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ.

ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ  ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. ಎಂದಿನಂತೆ ರಾತ್ರಿ ಕೆಲಸ ಮುಗಿಸಿ ಮೆಡಿಕಲ್ ಶಾಪ್‌ನ ಬಾಗಿಲು ಮುಚ್ಚಿ ಮನೆಗೆ ತೆರಳುವ ವೇಳೆ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದ ಖದೀಮರು ಸೋಮಶೇಖರ್‌ಗೆ ಚಾಕು ತೋರಿಸಿ ಚಿನ್ನದ ಸರ ಮತ್ತು ನಗದನ್ನು ಕಿತ್ತುಕೊಂಡಿದ್ದಾರೆ.

ಯುವಕರು ಮುಖಕ್ಕೆ ಮಂಕಿ ಕ್ಯಾಪ್ ಧರಿಸಿದ್ದರಿಂದ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

4 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

4 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

4 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

4 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

4 hours ago