Mysore
19
haze

Social Media

ಬುಧವಾರ, 11 ಫೆಬ್ರವರಿ 2026
Light
Dark

ಭಾರೀ ಮಳೆ; ಮೈಸೂರು, ಕೊಡಗಿಗೆ ಯೆಲ್ಲೋ ಅಲರ್ಟ್‌

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ.
ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ.

ಮೈಸೂರಿನ ಅಗ್ರಹಾರ, ಕೆ.ಆರ್‌ ಸರ್ಕಲ್‌, ಒಂಟಿಕೊಪ್ಪಲ್‌, ಸರಸ್ವತಿಪುರಂ, ಕುವೆಂಪುನಗರ, ಬೋಗಾದಿ ಸೇರಿದಂತೆ ಹಲವೆಡೆ ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ರಾತ್ರಿ 9 ಕ್ಕೆ ಶುರುವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು.

ಮೇ. 11 ರಂದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗೋ ಸಾಧ್ಯತೆ ಇರೋ ಕಾರಣ, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಳೆಯಿಂದ(ಮೇ.11) ಮೇ.14 ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ಮೇ.13ರಂದು ಬೆಳಗಾವಿ, ಬೀದರ್, ಕಲಬುರ್ಗಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Tags:
error: Content is protected !!