ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ.
ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ.
ಮೈಸೂರಿನ ಅಗ್ರಹಾರ, ಕೆ.ಆರ್ ಸರ್ಕಲ್, ಒಂಟಿಕೊಪ್ಪಲ್, ಸರಸ್ವತಿಪುರಂ, ಕುವೆಂಪುನಗರ, ಬೋಗಾದಿ ಸೇರಿದಂತೆ ಹಲವೆಡೆ ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ರಾತ್ರಿ 9 ಕ್ಕೆ ಶುರುವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು.
ಮೇ. 11 ರಂದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗೋ ಸಾಧ್ಯತೆ ಇರೋ ಕಾರಣ, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಳೆಯಿಂದ(ಮೇ.11) ಮೇ.14 ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.
ಮೇ.13ರಂದು ಬೆಳಗಾವಿ, ಬೀದರ್, ಕಲಬುರ್ಗಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…