ಮೈಸೂರು: ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ. ಸತ್ಯನ್, ಚಿತ್ರದುರ್ಗದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಹಾಗೂ ಮಂಡ್ಯದ ಎಸ್.ಜಿ. ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
ಮಾರ್ಚ್ 3ರಂದು ಮಧ್ಯಾಹ್ನ 12ಕ್ಕೆ ನಡೆಯುವ 19ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತಿಳಿಸಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೂರು ಪಿಎಚ್‌ಡಿ, 30 ಚಿನ್ನದ ಪದಕಗಳು ಹಾಗೂ 37 ನಗದು ಬಹುಮಾನ ವಿತರಣೆ ಮಾಡಲಾಗುವುದು. 3,398 ಪುರುಷರು ಹಾಗೂ 4,471 ಮಹಿಳೆಯರು ಸೇರಿದಂತೆ ಒಟ್ಟು 7,869 ಅಭ್ಯರ್ಥಿಗಳು ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…