ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಪಿಎಚ್‌ಡಿ ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಎನ್. ಹರೀಶ್ ಕುಮಾರ್ ಎಂಬುವವರು ಮುಕ್ತ ವಿವಿಗೆ ಪತ್ರ ಬರೆಯುವ ಮೂಲಕ ಪರೀಕ್ಷಾ ಲೋಪವನ್ನು ಬಿಚ್ಚಿಟ್ಟಿದ್ದಾರೆ.
ಇದೇ ಮಾ.17 ರಂದು ಪತ್ರಿಕೋದ್ಯಮ ವಿಷಯದಲ್ಲಿ ಪಿ.ಹೆಚ್.ಡಿ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಎಸ್‌ಓಯು ಅಂತರ್ಜಾಲದಲ್ಲಿ ಪ್ರಕಟಿಸಿದೆ. ಆದರೆ ಪ್ರಕಟಿಸಿರುವ CET Series-D (ಪತ್ರಿಕೋದ್ಯಮ ವಿಷಯ) ಕೀ-ಉತ್ತರಗಳು ತಪ್ಪಾಗಿರುವುದು ಹರೀಶ್ ಗಮನಕ್ಕೆ ಬಂದಿದೆ.
ಕೆ.ಎಸ್.ಒ.ಯು ಅಂತರ್ಜಾಲದಲ್ಲಿ ತಪ್ಪಾಗಿ ಪ್ರಕಟಿಸಿರುವ ಕೀ-ಉತ್ತರಗಳನ್ನು ಪ್ರಶ್ನೆ ಸಂಖ್ಯೆ ಸಮೇತ ಪಟ್ಟಿ ಮಾಡಿ ವಿವರ ಸಹಿತ ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿವಿಯಂತ ಉನ್ನತ ಸಂಸ್ಥೆಯೇ ಈ ರೀತಿ ಪ್ರಶ್ನೆಗಳಿಗೆ ತಪ್ಪು ಕೀ-ಉತ್ತರಗಳನ್ನು ಪ್ರಕಟ ಮಾಡಿರುವುದು ದಿಗ್ಧಮೆ ತಂದಿದೆ ಎಂದು ದೂರುದಾರ ಹರೀಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…