ಮೈಸೂರು

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇಂದು ಬೆಳಗ್ಗೆ ಎರಡು ವರ್ಷ ವಯಸ್ಸಿನ ಹೆಣ್ಣು ಚಿರತೆಯೊಂದು ಗುಂಡೇಟಿನಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ವನ್ಯಜೀವಿ ಅಂಗಾಂಗಕ್ಕಾಗಿ ಕಳ್ಳಬೇಟೆ ಇನ್ನೂ ನಡೆಯುತ್ತಿದೆ ಎಂಬುದಕ್ಕೆ ಪುಷ್ಟಿ ನೀಡುತ್ತಿದೆ ಈ ನಿಟ್ಟಿನಲ್ಲಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಡಾ. ಆದರ್ಶ್, ಚಿರತೆಯ ದೇಹದೊಳಗೆ ಮೂರು ಗುಂಡುಗಳು ಪತ್ತೆಯಾಗಿವೆ ಎಂದು ವರದಿ ಮಾಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ವನ್ಯಜೀವಿ ಕಳ್ಳಬೇಟೆಗಾರರನ್ನು ಪತ್ತೆ ಹಚ್ಚಿ ಕಾನೂನು ರೀತ್ಯ ಶಿಕ್ಷೆ ಕೊಡಿಸಲು ಮತ್ತು ಈ ವಲಯದಲ್ಲಿ ಗಸ್ತು ವೈಫಲ್ಯವಾಗಿದ್ದಲ್ಲಿ ಸಂಬಂಧಿತ ಗಸ್ತು ಸಿಬ್ಬಂದಿಯ ಮೇಲೆ ಶಿಸ್ತುಕ್ರಮ ಜರುಗಿಸಲು ಹಾಗೂ ಅರಣ್ಯ ಅಪರಾಧ ನಿಯಂತ್ರಣ ಕೋಶವನ್ನು ಹೆಚ್ಚು ಸಕ್ರಿಯಗೊಳಿಸಲು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

1 hour ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

1 hour ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

2 hours ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

2 hours ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

2 hours ago