ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯು ಇಂದು(ಜ.15) ಸ್ಥಗಿತಗೊಳಿಸಿದೆ.
ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚಿಸಿತ್ತು. ಬಳಿಕ ಅರಣ್ಯ ಇಲಾಖೆಯು ತಂಡ ರಚಿಸಿಕೊಂಡು ಕಾರ್ಯಚರಣೆ ನಡೆಸಿಸುತ್ತಿತ್ತು. ಚಿರತೆ ಕಾರ್ಯಚರಣೆಗೆ ಅಲ್ಲಲ್ಲಿ ಕ್ಯಾಮಾರ, ಡ್ರೋನ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, 10 ದಿನವಾದರೂ ಚಿರತೆಯ ಹೆಚ್ಚೆ ಗುರುತು ಎಲ್ಲೂ ಕಾಣಿಸಿಲ್ಲ. ಇದರ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ, ಅರಣ್ಯ ಇಲಾಖೆಯು ತನ್ನ ಕಾರ್ಯಚರಣೆಯನ್ನು ನಿಲ್ಲಿಸಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಇನ್ಛೋಸಿಸ್ ಕ್ಯಾಂಪಸ್ ಅನ್ನು ಬಲವರ್ಧನೆಗೊಳಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಜತೆಗೆ, ರಾತ್ರಿ ವೇಳೆ ಥರ್ಮಲ್ ಡ್ರೋಣ್ ಬಳಸಿ ಕ್ಯಾಂಪಸ್‌ನಲ್ಲಿ ನಿರಂತರ ನಿಗಾವಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…