ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಇದನ್ನು ಓದಿ: ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಟಿ.ನರಸೀಪುರದಲ್ಲಿರುವ ರಾಮಸ್ವಾಮಿ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ರೇಡ್ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.





