Mysore
26
broken clouds

Social Media

ಶನಿವಾರ, 23 ಮೇ 2026
Light
Dark

ನರಸೀಪುರ | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ.

ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ. ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು ಪರಾರಿಯಾಗಿದ್ದಾರೆ. ಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಟಿ.ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Tags:
error: Content is protected !!