ಮೈಸೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿಯೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಕೋವಿಡ್ ಭೀತಿ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಳಾಂಗಣ ಕಾರ್ಯಕ್ರಮದಲ್ಲಿ ತಪ್ಪದೇ ಮಾಸ್ಕ್ ಬಳಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಈ ಕುರಿತು ಶನಿವಾರ ಮಾತನಾಡಿದ ಅವರು, ಮೈಸೂರಿನಲ್ಲಿ ಈವರೆಗೆ ಒಟ್ಟು 7 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. 7ನೇ ಪ್ರಕರಣ ಕಂಡುಬಂದಿರುವ ವ್ಯಕ್ತಿ ಸಹಾ ಅನಾರೋಗ್ಯದಿಂದ ಬಳಲುತ್ತಿರುವವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಕಂಡುಬಂದಿರುವ ಯಾರಿಗೂ ಟ್ರಾವೆಲ್ ಹಿಸ್ಟರಿ ಇಲ್ಲ. ಆದ್ದರಿಂದ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.
ರೋಗ ಲಕ್ಷಣ ಇದ್ದವರಿಗೆ ಮಾತ್ರ ಟೆಸ್ಟಿಂಗ್ ಮಾಡಲಾಗುತ್ತಿದ್ದು, ನಿತ್ಯ ಮೈಸೂರಿನಲ್ಲಿ 70 ಟೆಸ್ಟಿಂಗ್ ಮಾಡಲಾಗುತ್ತಿದೆ. ಮಾಡಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದ್ದು, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಭಂದವಿಲ್ಲ. ಸದ್ಯಕ್ಕೆ ಪ್ರವಾಸಿ ತಾಣಗಳಲ್ಲಿ ಟೆಸ್ಟಿಂಗ್ ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…