ಮೈಸೂರು: ಬೀದರ್ ಹಾಗೂ ಮಂಗಳೂರು ದರೋಡೆ ಮಾಸುವ ಮುನ್ನವೇ ಇದೀಗ ಸಿಎಂ ತವರು ಜಿಲ್ಲೆಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ಲೂಟಿಕೋರರು ದರೋಡೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಸಮೀಪದ ರಸ್ತೆ ಮಾರ್ಗದಲ್ಲಿ ಇಂದು ಕೇರಳ ಮೂಲದ ಉದ್ಯಮಿ ಸೂಫಿ ಎಂಬುವವರ ಇನ್ನೋವಾ ಕಾರನ್ನು ಅಡ್ಡಗಟ್ಟಿ ನಗದು ಸಮೇತ ಕಾರನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಘಟನೆ ಹಾಡಹಗಲೇ ನಡೆದಿದ್ದು, ದರೋಡೆಯ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನೂ ವಿಷಯ ತಿಳಿದ ಕೂಡಲೇ ಮೈಸೂರು ಎಸ್‌ಪಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ದರೋಡೆಕೋರರು ರಾಜ್ಯ ಬಿಟ್ಟು ಹೋಗದಂತೆ ಎಲ್ಲಾ ಕಡೆಗಳಲ್ಲಿಯೂ ನಾಕಾಬಂಧಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…
ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್…