ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು ಹಾಗೂ ಮಹಿಳೆಯರು ಭಾಗಿಯಾಗಿದ್ದರು.
ಜಿಲ್ಲಾಧಿಕಾರಿಗಳು ಗ್ರಾಮಸ್ಥರುಗಳ ಅಭಿಪ್ರಾಯದ ವಿರುದ್ಧವಾಗಿ ಆದೇಶ ನೀಡಿದ್ದಾರೆ, ಇದು ಸರಿಯಲ್ಲ. ಸದರಿ ಜಾಗ ವಸತಿ ವಲಯ, ಯಾವ ಭೂ ಪರಿವರ್ತನೆಯಾಗಿಲ್ಲ. ಇದನ್ನು ಪರಿಗಣಿಸದೆ ಶಾಲೆಗೆ ಅನುಮತಿ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದ್ದಾರೆ.
ಡಿಸಿ ಆದೇಶದ ವಿರುದ್ಧ ಕಾನೂನು ರೀತಿ ಹೋರಾಟಕ್ಕೆ ಮುಂದಾಗಲಿದ್ದೇವೆ. ಈ ಬಗ್ಗೆ ಪುನರ್‌ಪರಿಶೀಲನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಸೀದಿ ತೆರವಿಗೆ ಅನುಮತಿ ಬೇಡ ; ಚಂದ್ರಮ್ಮ
ವಿವಾದಿತ ಸ್ಥಳದಲ್ಲಿ ಮಸೀದಿ ತೆರೆಯಲಿಕ್ಕೆ ಅನುಮತಿ ನೀಡಬಾರದು. ಆ ಮಸೀದಯಿಂದಲೇ ನನ್ನ ಮಗನ ಕೊಲೆ ಆಗಿದೆ. ಯಾವುದೇ ರೀತಿಯ ಚಟುವಟಿಕೆಗೆ ಅನುಮತಿ ಕೊಡಬಾರದು. ಒಂದು ವೇಳೆ ಅನುಮತಿ ಕೊಟ್ಟರೆ ಅದೇ ಸ್ಥಳದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೊಮ್ಮಕ್ಕಳು ನಾವು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಯಾತಮಾರನಹಳ್ಳಿ ರಾಜು ತಾಯಿ ಚಂದ್ರಮ್ಮ ಹೇಳಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…