Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮೈಸೂರು | ಮೇಟಗಳ್ಳಿ ಠಾಣಾಧಿಕಾರಿ ಶಬರೀಶ್‌ಗೆ ಮುಖ್ಯಮಂತ್ರಿ ಪದಕ

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌ಠಾಣೆಯ ಎಸ್‌ ಐ ವಿ.ಆರ್. ಶಬರೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಿದರು.

ಗೃಹ ಸಚಿವ ಜಿ. ಪರಮೇಶ್ವರ್, ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿ.ಆರ್. ಶಬರೀಶ್ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಹಾಗೂ ಪತ್ತೆ ಹಚ್ಚುವಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ೨೦೨೨ನೇ ಸಾಲಿನಲ್ಲಿ ಇವರು ತೋರಿದ ಅಸಾಧಾರಣ ನೈಪುಣ್ಯತೆ, ಪ್ರಾಮಾಣಿಕತೆ ಹಾಗೂ ದಕ್ಷತೆಗಾಗಿ ೨೦೨೨ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಶಿಫಾರಸು ಮಾಡಲಾಗಿತ್ತು.

Tags:
error: Content is protected !!