ಮೈಸೂರು

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.

ಶೇ30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾಚ್೯ 2027 ರೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿ.ಸಿ ಗ್ರಾಮೀಣ ವಿಭಾಗದ ಜಿಲ್ಲಾ ನಿಯಂತ್ರಕ ಶ್ರೀನಿವಾಸ್ ಅವರು ಕಾಮಗಾರಿ ಕುರಿtu ಮಾಹಿತಿ ನೀಡಿ, ಬನ್ನಿಮಂಟಪದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ಗಳು ಬಸ್ ನಿಲ್ದಾಣದ ಒಳಗೆ ಹಾಗೂ ಹೊರ ಭಾಗಕ್ಕೆ ಹೋಗಲು ಪ್ರತ್ಯೇಕ 100 ಅಡಿ ರಸ್ತೆಯ ಅವಶ್ಯಕತೆ ಇರುವುದಾಗಿ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು‌ ಬಸ್ ನಿಲ್ದಾಣ ನಿರ್ಮಾಣಕ್ಕೆ ಬೇಕಿರುವ ಎಲ್ಲಾ ಸೌಲಭ್ಯವನ್ನು ಒದಗಿಸಲಾಗುವುದು. 100 ಅಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. ‌

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

17 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

1 hour ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago