ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.
ಶೇ30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾಚ್೯ 2027 ರೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೆ.ಎಸ್.ಆರ್.ಟಿ.ಸಿ ಗ್ರಾಮೀಣ ವಿಭಾಗದ ಜಿಲ್ಲಾ ನಿಯಂತ್ರಕ ಶ್ರೀನಿವಾಸ್ ಅವರು ಕಾಮಗಾರಿ ಕುರಿtu ಮಾಹಿತಿ ನೀಡಿ, ಬನ್ನಿಮಂಟಪದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ಗಳು ಬಸ್ ನಿಲ್ದಾಣದ ಒಳಗೆ ಹಾಗೂ ಹೊರ ಭಾಗಕ್ಕೆ ಹೋಗಲು ಪ್ರತ್ಯೇಕ 100 ಅಡಿ ರಸ್ತೆಯ ಅವಶ್ಯಕತೆ ಇರುವುದಾಗಿ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಬಸ್ ನಿಲ್ದಾಣ ನಿರ್ಮಾಣಕ್ಕೆ ಬೇಕಿರುವ ಎಲ್ಲಾ ಸೌಲಭ್ಯವನ್ನು ಒದಗಿಸಲಾಗುವುದು. 100 ಅಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…