ಮೈಸೂರು

ಮೈಸೂರು : ಮೊದಲ ವಾರ್ಮ್‌ ಫೂಲ್‌ ಉದ್ಘಾಟಿಸಿದ ಶಾಸಕ ಶ್ರೀವತ್ಸ

ಮೈಸೂರು: ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆ ಹಾಗೂ ಎಂಎಎಸ್‌ಪಿ ಅಕ್ವಾಟಿಕ್ಸ್ ಕ್ಲಬ್‌ನ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಈಜುಕೊಳವನ್ನು ಶಾಸಕ ಟಿ.ಎಸ್.ಶ್ರೀವತ್ಸ  ಉದ್ಘಾಟಿಸಿದರು.

ನಗರದ ಲಲಿತಾದ್ರಿಪುರದ ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನೂತನವಾಗಿ ನಿಮಿ ಸಿರುವ ನಗರದ ಮೊದಲ ವಾರ್ಮ್ ಈಜುಕೊಳವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವವರಿಗೆ ಈಜು ಕಲಿಕೆ ಸಹಕಾರಿಯಾಗಲಿದೆ. ಲಲಿತಾದ್ರಿಪುರ ಭಾಗಕ್ಕೆ ಯಾವುದೇ ಈಜುಕೊಳವಿರಲಿಲ್ಲ. ಈ ಭಾಗದ ಈಜು ಪ್ರಿಯರು ನಗರ ಕೇಂದ್ರದಲ್ಲಿರುವ ಈಜುಕೊಳಗಳಿಗೆ ಆಗಮಿಸುತ್ತಿದ್ದರು. ಇದೀಗ ಹೊಸ ಈಜುಕೊಳ ನಿರ್ಮಾಣದಿಂದ ಆ ಕೊರತೆ ದೂರವಾಗಲಿದೆ. ಎಲ್ಲರೂ ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು ಎಂದು  ಹೇಳಿದರು.

ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಮಾತನಾಡಿ,  ಈಜು ಜೀವ ರಕ್ಷಣೆಯ ಕಲೆಯಾಗಿದೆ. ಇದನ್ನು ಪ್ರತಿಯೊಬ್ಬರು ಕಲಿಯಬೇಕು ಎಂದು ಸಲಹೆ ನೀಡಿದರು.

ಮೈಸೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಿ.ಎಸ್.ಗುರು ಮಾತನಾಡಿ, ಈಜು ದೇಹದ ಎಲ್ಲಾ ಅಂಗಾಂಗಗಳಿಗೂ ವ್ಯಾಯಾಮವನ್ನು ನೀಡುವ ಕ್ರೀಡೆಯಾಗಿದೆ. ಮಕ್ಕಳು ಬಹುಮುಖ ಪ್ರತಿಭೆಗಳಾಗಿ ಹಾಗೂ ಆರೋಗ್ಯವಂತರಾಗಿ ಬೆಳೆಯಲು ಈಜು ಅನುಕೂಲವಾಗುತ್ತದೆ ಎಂದರು.

ಚಲನಚಿತ್ರ ನಟ ಶಂಕರ್ ಅಶ್ವಥ್ ಮಾತನಾಡಿದರು. ವೈ.ಎಸ್.ಪ್ರಾಪರ್ಟಿಸ್‌ನ ಕೆ.ಎನ್.ಸಂತೋಷ್, ಕೆ.ಎಚ್.ಕಿರಣ್, ಸೇಫ್ ವ್ಹೀಲ್ ಟ್ರಾವೆಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಪ್ರಶಾಂತ್, ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಡಾ.ದೀಪ್ತಿ ಚತುರ್ವೇದಿ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago