ಮೈಸೂರು:ಶುಕ್ರವಾರ ಸಂಜೆ(ಜೂ. 7) ಗುಜರಿ ಗೋಡೌನ್‌ನಲ್ಲಿ ಕ್ಲೋರಿನ್ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಯ ವಿವರ:
ಹಳೆ ಕೆಸರೆ ಬಳಿ ಇರುವ ಮೆಹಬೂಬ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿಯೊಂದರಲ್ಲಿ ಸಾಮಾನುಗಳನ್ನು ತೆರುವು ಮಾಡುವಾಗ ಕ್ಲೋರಿನ್ ಮತ್ತು ಅಮೋನಿಯಂ ಇದ್ದ ಸಿಲಿಂಡರ್‌ಗಳನ್ನು ಖಾಲಿ ಎಂದು ತಿಳಿದು ಕಾರ್ಮಿಕರು ತೆರವು ಮಾಡಿದಾಗ ಅದರಲ್ಲಿದ್ದ ವಿಷನಿಲ ಸೋರಿಕೆಯಾಗಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಅಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಮತ್ತಷ್ಟು ವಿಷನೀಲ ಸೋರಿಕೆಯಾಗಿ ಗಾಳಿಯಲ್ಲಿ ಹರಡಿದ್ದರಿಂದ ಅಕ್ಕಪಕ್ಕದ ಅಂಗಡಿಗಳ ಕಾರ್ಮಿಕರಿಗೂ ಉಸಿರಾಟದಲ್ಲಿ ತೊಂದರೆಯಾದ ಕಾರಣ ಅವರನ್ನೂ ಕೂಡ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…
ವಾಷಿಂಗ್ಟನ್: ಇರಾನ್ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…