Mysore
21
overcast clouds
Light
Dark

ಮೈಸೂರು: ಗೃಹ ಪ್ರವೇಶದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ: ಓರ್ವ ವೃದ್ಧೆ ಸಾವು

ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು.

ಘಟನೆಯ ವಿವಿರ
ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 300ಕ್ಕೂ ಹೆಚ್ಚು ಜನರು ಊಟ ಸೇವಿಸಿದ್ದರು. ಆ ಪೈಕಿ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಉಂಟಾಗಿದ್ದು, ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗ್ರಾಮದಲ್ಲಿ ಗ್ರಾಮ ಆರೋಗ್ಯಧಿಕಾರಿ ಮೊಕ್ಕಂ ಹೂಡಿದ್ದು, ಆರೋಗ್ಯ ದೃಷ್ಠಿಯಿಂದ ಊಟ ಸೇವಿಸಿದ್ದ ಎಲ್ಲರ ಆರೋಗ್ಯವನ್ನು ಪರೀಕ್ಷಿಸುತ್ತಿದ್ದಾರೆ.