ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ಮುಡಾ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಆರ್ಥಿಕವಾಗಿ ಹಿಂದುಳಿದವರಿಗೆ, ಬಡವರಿಗೆ ಹಾಗೂ ಸೂರಿಲ್ಲದವರಿಗೆ ರಿಯಾಯಿತಿ ದರದಲ್ಲಿ ನೀಡಬೇಕಾದ ನಿವೇಶನವನ್ನು, ಮುಡಾವು ರಿಯಲ್ ಎಸ್ಟೇಟ್ ಕೋರರಿಗೆ, ದಲ್ಲಾಳಿಗಳಿಗೆ ನೀಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮೈಸೂರಿನಲ್ಲಿ ಲಕ್ಷಾಂತರ ಜನರು ಸ್ವಂತ ಮನೆ ಇಲ್ಲದೇ ಬಾಡಿಗೆ ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಕೆಲವು ಜನ ಉಸಿರುಗಟ್ಟುವ ಸಣ್ಣ ಸಣ್ಣ ಮನೆಯಲ್ಲೇ ವಾಸವಿದ್ದಾರೆ. ಹೀಗಿರುವಾಗ ಮೂಡಾವು ಬಲಾಢ್ಯರಿಗೆ, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಮುಡಾದಲ್ಲಿ ಈಗ ಹಾಗೂ ಈ ಹಿಂದೆ ನಡೆದಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆಯಾಗಬೇಕು. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಯಾಗಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…