Mysore
25
haze

Social Media

ಗುರುವಾರ, 29 ಜನವರಿ 2026
Light
Dark

ಮುಡಾ ಪ್ರಕರಣ: ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್‌ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ.

ನಗರದ ಲೋಕಾಯುಕ್ತ ಪೊಲೀಸರಿಗೆ ಇಂದು(ಫೆಬ್ರವರಿ.14) ದೂರು ನೀಡಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಡಾದ 50:50 ಅನುಪಾತದ ಬದಲಿ ನಿವೇಶನಗಳಿಗೆ ಸಂಬಂಧ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ ಮನವಿ ಪತ್ರ ನೀಡಿದ್ದೆ. ಆದರೆ ಲೋಕಾಯುಕ್ತ ಅಧಿಕಾರಿಗಳು ಕೇವಲ ಸಿಎಂ ಸಿದ್ದರಾಮಯ್ಯ ಕುಟುಂಬದ 14 ನಿವೇಶನಗಳ ಬಗ್ಗೆ ಮಾತ್ರ ತನಿಖೆ ಮಾಡಿದ್ದಾರೆ. ಹೀಗಾಗಿ ಇನಿತರ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನು ದಟ್ಟಗಳ್ಳಿ ಗ್ರಾಮದಲ್ಲಿ ಸಿಎಂ ಪತ್ನಿ ಪಾರ್ವತಿ ಅವರು 24 ಲಕ್ಷ ರೂ. ನೀಡಿ ಒಂದು ಸೈಟು ಖರೀದಿ ಮಾಡಿ, ಅದನ್ನು 1 ಕೋಟಿ ರೂ.ಗಳಿಗೆ ಮಾರಾಟ ಮಾಡಿದ್ದಾರೆ. ಆ ಸೈಟ್‌ ಅನ್ನು ಸತ್ಯನಾರಾಯಣ ಎಂಬುವವರು ಖರೀದಿ ಮಾಡಿದ್ದಾರೆ. ಈ ನಿವೇಶನವನ್ನು 2008 ಖರೀದಿಸಿ 2014 ರಲ್ಲಿ ಮಾರಾಟ ಮಾಡಲಾಗಿದೆ. ಆ ಆರು ವರ್ಷಗಳಲ್ಲಿ ೭೫ ಲಕ್ಷ ರೂ. ಲಾಭ ಮಾಡಿಕೊಂಡಿದ್ದಾರೆ. ಅಲ್ಲದೇ ಅದನ್ನು ಪಾರ್ವತಿ ಸಿದ್ದರಾಮಯ್ಯ ಅವರು ಖರೀದಿಸುವಾಗ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದೇ ನೋಂದಣಿ ಅಧಿಕಾರಿಗಳನು ತನಿದ್ದ ಕಡೆಯೇ ಕರೆಸಿಕೊಂಡು ಮಾರಾಟ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಅದೇ ರೀತಿ ಮುಡಾ ಮಾಜಿ ಆಯುಕ್ತ ನಟೇಶ್ ಅವರು ಸೈಯದ್ ಅಲಿ ಅವರಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನಲೆ ಸೈಯದ್ ಅಲಿ ಅವರು ನಟೇಶ್ ಹೆಂಡತಿಯ ಸೋದರ ಮಾವ ರಾಜಶೇಖರ್ ಅವರ ಹೆಂಡತಿ ತಾರ ಅವರಿಗೆ ಒಂದು ಸೈಟ್ ಮಂಜೂರು ಮಾಡಿದ್ದಾರೆ. ಈ ಕಾರಣಕ್ಕೆ ಈ ಎಲ್ಲವನ್ನೂ ತನಿಖೆ ಮಾಡಲು ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆಯೊಂದಿಗೆ ಮನವಿ ಪತ್ರ ನೀಡಿದ್ದೇನೆ ಎಂದು ತಿಳಿಸಿದರು.

Tags:
error: Content is protected !!