ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ.
ನಗರದ ಲೋಕಾಯುಕ್ತ ಪೊಲೀಸರಿಗೆ ಇಂದು(ಫೆಬ್ರವರಿ.14) ದೂರು ನೀಡಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಡಾದ 50:50 ಅನುಪಾತದ ಬದಲಿ ನಿವೇಶನಗಳಿಗೆ ಸಂಬಂಧ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ ಮನವಿ ಪತ್ರ ನೀಡಿದ್ದೆ. ಆದರೆ ಲೋಕಾಯುಕ್ತ ಅಧಿಕಾರಿಗಳು ಕೇವಲ ಸಿಎಂ ಸಿದ್ದರಾಮಯ್ಯ ಕುಟುಂಬದ 14 ನಿವೇಶನಗಳ ಬಗ್ಗೆ ಮಾತ್ರ ತನಿಖೆ ಮಾಡಿದ್ದಾರೆ. ಹೀಗಾಗಿ ಇನಿತರ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
ಇನ್ನು ದಟ್ಟಗಳ್ಳಿ ಗ್ರಾಮದಲ್ಲಿ ಸಿಎಂ ಪತ್ನಿ ಪಾರ್ವತಿ ಅವರು 24 ಲಕ್ಷ ರೂ. ನೀಡಿ ಒಂದು ಸೈಟು ಖರೀದಿ ಮಾಡಿ, ಅದನ್ನು 1 ಕೋಟಿ ರೂ.ಗಳಿಗೆ ಮಾರಾಟ ಮಾಡಿದ್ದಾರೆ. ಆ ಸೈಟ್ ಅನ್ನು ಸತ್ಯನಾರಾಯಣ ಎಂಬುವವರು ಖರೀದಿ ಮಾಡಿದ್ದಾರೆ. ಈ ನಿವೇಶನವನ್ನು 2008 ಖರೀದಿಸಿ 2014 ರಲ್ಲಿ ಮಾರಾಟ ಮಾಡಲಾಗಿದೆ. ಆ ಆರು ವರ್ಷಗಳಲ್ಲಿ ೭೫ ಲಕ್ಷ ರೂ. ಲಾಭ ಮಾಡಿಕೊಂಡಿದ್ದಾರೆ. ಅಲ್ಲದೇ ಅದನ್ನು ಪಾರ್ವತಿ ಸಿದ್ದರಾಮಯ್ಯ ಅವರು ಖರೀದಿಸುವಾಗ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದೇ ನೋಂದಣಿ ಅಧಿಕಾರಿಗಳನು ತನಿದ್ದ ಕಡೆಯೇ ಕರೆಸಿಕೊಂಡು ಮಾರಾಟ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಅದೇ ರೀತಿ ಮುಡಾ ಮಾಜಿ ಆಯುಕ್ತ ನಟೇಶ್ ಅವರು ಸೈಯದ್ ಅಲಿ ಅವರಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನಲೆ ಸೈಯದ್ ಅಲಿ ಅವರು ನಟೇಶ್ ಹೆಂಡತಿಯ ಸೋದರ ಮಾವ ರಾಜಶೇಖರ್ ಅವರ ಹೆಂಡತಿ ತಾರ ಅವರಿಗೆ ಒಂದು ಸೈಟ್ ಮಂಜೂರು ಮಾಡಿದ್ದಾರೆ. ಈ ಕಾರಣಕ್ಕೆ ಈ ಎಲ್ಲವನ್ನೂ ತನಿಖೆ ಮಾಡಲು ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆಯೊಂದಿಗೆ ಮನವಿ ಪತ್ರ ನೀಡಿದ್ದೇನೆ ಎಂದು ತಿಳಿಸಿದರು.
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ…
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…