ಮೈಸೂರು

ಮೈಸೂರು | ನಾಳೆಯಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ.

ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ  ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ ಭಾಷೆಯ ನಾಟಕಗಳು, ಚಲನಚಿತ್ರೋತ್ಸವ, ಭಿತ್ತಿಚಿತ್ರ ಪ್ರದರ್ಶನ, ಕರಕುಶಲ ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ, ದೇಸಿ ಆಹಾರ ಮೇಳ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣ ಸೇರಿದಂತೆ ಹಲವು ಆಕರ್ಷಕ ಪ್ರದರ್ಶನಗಳು ವಿಶೇಷ ಮೆರುಗು ನೀಡಲಿವೆ.

ಒಂದು ವಾರ ನಡೆಯಲಿರುವ ಬಹುರೂಪಿ ಉತ್ಸವದಲ್ಲಿ ದೇಶಾದ್ಯಂತದ ೫೦೦ಕ್ಕೂ ಹೆಚ್ಚಿನ ರಂಗಕಲಾವಿದರು, ೩೦೦ಕ್ಕೂ ಹೆಚ್ಚಿನ ಜನಪದ ಕಲಾವಿದರು ಭಾಗವಹಿಸುವ ನಿರೀಕ್ಷೆ ಇದೆ.

ಜ.೧೪ ರಂದು ಸಂಜೆ ೫.೩೦ಕ್ಕೆ ವನರಂಗದಲ್ಲಿ ಬಹುರೂಪಿ ನಾಟಕೋತ್ಸವಕ್ಕೆ ನಟ, ಹಿರಿಯ ರಂಗಕರ್ಮಿ ಅತುಲ್ ಕುಲಕರ್ಣಿ ಚಾಲನೆ ನೀಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು. ಕರಕುಶಲ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸುವರು. ಸಂಸದ ಯದುವೀರ ಒಡೆಯರ್, ಶಾಸಕ ಕೆ.ಹರೀಶ್‌ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ರಂಗಾಯಣದ ಉಪ ನಿರ್ದೇಶಕ ಡಾ.ಎಂ.ಡಿ.ಸುದರ್ಶನ, ರಂಗಸಮಾಜದ ಸದಸ್ಯ ಸುರೇಶ್ ಬಾಬು ಮತ್ತಿತರರು ಹಾಜರಿರುತ್ತಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

4 mins ago

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

9 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

9 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

11 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

11 hours ago