ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ತೀವ್ರ ಸದ್ದು ಆಗುತ್ತಿರುವ ನಡುವೆಯೇ ಮುಡಾಗೆ ನೂತನ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಮುಡಾ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಎ.ಎನ್ ರಘುನಂದನ್ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ಅವರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಹಗರಣದಲ್ಲಿ ನಾಲ್ವರು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದ್ದ ಹಿನ್ನೆಲೆ ಸಚಿವ ಭೈರತಿ ಸುರೇಶ್ ಅವರು ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆ ಮಾಡುವುದಾಗಿ ಹೇಳಿದ್ದರು.