ಮೈಸೂರು: ಮೈಸೂರು ಕರ್ನಾಟಕ ಶಾಸ್ತ್ರೀಯ ಸಂಗೀತದ ಮೂಲ . ಕೀರ್ತನೆಗಳ ಮೂಲಕ ಪುರಂದರದಾಸರು ಸಂಗೀತ ಕ್ಷೇತ್ರಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು ಸಂಗೀತ ಸುಗಂಧ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಸಂಗೀತ ದೇಶದಾದ್ಯಂತ ಮನೆ ಮಾತಾಗಿದೆ. ಅದರಲ್ಲೂ ಸಂಗೀತ ಕ್ಷೇತ್ರಕ್ಕೆ ಮೈಸೂರಿನವರು ನೀಡಿದ ಕೊಡುಗೆ ಅಪಾರವಾಗಿದೆ. ಹೀಗಾಗಿ ಇಂದು ನಾನು ಮೈಸೂರು ಸಂಗೀತ ಸುಗಂಧ ಕಾರ್ಯಕ್ರಮ ಉದ್ಘಾಟಿಸಿದ್ದು ಅಪಾರ ಸಂತಸವನ್ನು ತಂದಿದೆ ಎಂದರು.
ದೇಶ ಆರ್ಥಿಕವಾಗಿ ಸದೃಢವಾದರೆ ಪ್ರತಿಯೊಂದು ರಂಗಗಳಲ್ಲೂ ಸದೃಢವಾಗುತ್ತದೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಇಡೀ ದೇಶದಾದ್ಯಂತ ಮನೆ ಮಾತಾಗಿದ್ದು, ಒಂದು ದೇಶ ಶ್ರೇಷ್ಠ ಭಾರತವಾಗಬೇಕೆದರೆ ಸಂಗೀತ ಪ್ರೇರಣೆ ಆಗತ್ಯವಾಗಿದೆ. ದೇಶದಲ್ಲಿ ವಿಭಿನ್ನವಾದ ಭಾಷೆಗಳು ಹಾಗೂ ಸಂಸ್ಕೃತಿಯಿಂದ ಕೂಡಿದ್ದರು ಸಹ ವಿವಿಧತೆಯಲ್ಲಿ ಏಕತೆಯನ್ನು ಕಾಣಬಹುದಾಗಿದೆ. ಈ ಸಂಸ್ಕೃತಿಗಳಲ್ಲಿ ಕನ್ನಡ ಭಾಷೆ ಭಕ್ತಿ ಸಂಗೀತದ ಮುಖಾಂತರ ಮನವನ್ನು ಮುಟ್ಟುತ್ತದೆ. ಅದರಲ್ಲಿ ಮೈಸೂರು ದಾಸ ಪರಂಪರೆ ಹಲವು ವಿಶೇಷತೆಗಳನ್ನು ಹೊಂದಿದೆ. ಅಲ್ಲದೇ, ಪುರಂದರದಾಸ, ಕನಕದಾಸ, ವಾದಿರಾಜ ದಾಸ ಸೇರಿದಂತೆ ಮುಂತಾದವರು ದಾಸ ಪರಂಪರೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಶಾಸಕ ಟಿ.ಎಸ್.ಶ್ರೀವತ್ಸ ಉಪಸ್ಥಿತರಿದ್ದರು.
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…
ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…
ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…