ಮೈಸೂರು

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ

ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ ಕೂಡಿ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ‘ಬೃಹತ್ ಮಹಾನಗರ ಪಾಲಿಕೆ’ಯಾಗಿ ಅಧಿಕೃತವಾಗಿ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರ ಜ.8 ರಂದು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದು, ಬೃಹತ್ ಮಹಾನಗರ ಪಾಲಿಕೆ ರಚನೆಯ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನಗಳ ಒಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗೆ ನೀಡಲಾದ 30 ದಿನಗಳ ನಂತರ ಸರ್ಕಾರ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆಯ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಿದೆ. ಗ್ರೇಡ್-1 ಮೈಸೂರು, ಗ್ರೇಟರ್ ಮೈಸೂರು ಎನ್ನುವ ವಿಚಾರಕ್ಮೂ ತೆರೆ ಎಳೆದು ಸರ್ಕಾರ ಬೃಹತ್ ಮೈಸೂರು ನಗರಪಾಲಿಕೆ ಯನ್ನಾಗಿ ಅಧಿಕೃತವಾಗಿ ರಚಿಸುವ ಪ್ರಕ್ರಿಯೆ ಆರಂಭಿಸಿದೆ.

ಆಕ್ಷೇಪಣೆಗಳನ್ನು ಎಲ್ಲಿ ಸಲ್ಲಿಸಬೇಕು?:
ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಯ ಸಂಬಂಧ ಆಕ್ಷೇಪಣೆಗಳನ್ನ 30 ದಿನಗಳ ಒಳಗೆ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. 30 ದಿನಗಳು ಕಳೆದ ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಲಾಗುವುದು. ನಾಗರಿಕರು, ಸಂಘ ಸಂಸ್ಥೆಗಳು ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಬಹುದು.

ಯಾವೆಲ್ಲ ಪ್ರದೇಶ ಸೇರ್ಪಡೆ?
ಬೃಹತ್ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳು ಹಾಗೂ ಶ್ರೀರಾಂಪುರ, ರಮ್ಮನಹಳ್ಳಿ, ಕಡಕೊಳ, ಬೋಗಾದಿ ಪಟ್ಟಣ ಪಂಚಾಯಿತಿಗಳು, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ (ಪೂರ್ಣ), ಆಲನಹಳ್ಳಿ ಗ್ರಾಮ ಪಂಚಾಯಿತಿಯ ಅಲನಹಳ್ಳಿ, ಲಲಿತಾದ್ರಿಪುರ ಗ್ರಾಮಗಳು, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಸಿದ್ದಲಿಂಗಪುರ, ಬೆಲವತ್ತ, ಕೆಸರೆ, ಮೇಟಗಳ್ಳಿ ಗ್ರಾಮಗಳು, ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ, ಕರಕನಹಳ್ಳಿ, ಮೈದನಹಳ್ಳಿ, ಮೇಗಳಾಪುರ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿಯ ಧನಗಳ್ಳಿ, ಯಡಹಳ್ಳಿ, ಕೆಂಚಲಗೂಡು, ಹಾಲಾಳು, ಚೌಡಹಳ್ಳಿ (ಕೋಟೆಹುಂಡಿ) ಗ್ರಾಮಗಳು, ಮಲ್ಲಹಳ್ಳಿ (ಬೀರಿಹುಂಡಿ) ಗ್ರಾಮ ಪಂಚಾಯಿತಿಯ ಮಲ್ಲಹಳ್ಳಿ-ಬೀರಿಹುಂಡಿ, ಗೋಹಳ್ಳಿ, ಕುಮಾರಬೀಡು, ಬಲ್ಲಹಳ್ಳಿ ಗ್ರಾಮಗಳು, ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಮತ್ತು ನಾಗವಾಲ ಗ್ರಾಮ ಪಂಚಾಯಿತಿಯ ನಾಗವಾಲ, ಬೊಮ್ಮನಹಳ್ಳಿ, ಹುಯಿಲಾಳು ಗ್ರಾಮಗಳು ಒಳಗೊಂಡಿವೆ.

ಜನಸಂಖ್ಯೆ ವಿವರ:
ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ವಾರ್ಡ್‌ಗಳು ಇವೆ. ಬೃಹತ್ ಮೈಸೂರು ಮಹಾನಗರಪಾಲಿಕೆ ರಚನೆ ನಂತರ ವಾರ್ಡ್‌ಗಳ ಸಂಖ್ಯೆ ಜನಸಂಖ್ಯೆಗೆ ಅನುಗುಣವಾಗಿ 100ಕ್ಕೂ ಹೆಚ್ಚಾಗಲಿದೆ. 2011ರ ಜನಗಣತಿ ಪ್ರಕಾರ ನಗರದಲ್ಲಿ 9,20,550 ಜನಸಂಖ್ಯೆ ಇದ್ದು, ಪ್ರಸ್ತುತ 11,46,069 ಜನಸಂಖ್ಯೆ ಇರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಬೃಹತ್ ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿ 14,16,671 ಜನಸಂಖ್ಯೆ ಇರಬಹುದು ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರ 2025ರ ಜನಗಣತಿ ನಡೆಸಿದ ನಂತರ ಎಷ್ಟು ಜನರು ವಾಸವಿದ್ದಾರೆ ಎಂಬ ನಿಖರ ಅಂಕಿ ಅಂಶ ದೊರೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ…

17 mins ago

ನಾನೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ: ಡೊನಾಲ್ಡ್‌ ಟ್ರಂಪ್‌ ಘೋಷಣೆ

ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು…

28 mins ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ಸಿಬಿಐ ಎದುರು ವಿಚಾರಣೆಗೆ ಹಾಜರಾದ ವಿಜಯ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ…

51 mins ago

ಇಸ್ರೋಗೆ ಮತ್ತೊಂದು ಮೈಲಿಗಲ್ಲು: ನಭಕ್ಕೆ ಹಾರಿದ ಪಿಎಸ್‌ಎಲ್‌ವಿ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್‌ಎಲ್‌ವಿ-C62 ರಾಕೆಟ್‌ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…

2 hours ago

ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…

3 hours ago