Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಮೈಸೂರು | ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ದೊರಕಿಸಿ ; ಜಿಲ್ಲಾಧಿಕಾರಿ

ಮೈಸೂರು: ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹಳ ಮುಖ್ಯವಾಗಿದೆ. ಅವರಿಗೆ ವಿಶೇಷ ಗೌರವ ನೀಡಿ, ಕಾಲಕಾಲಕ್ಕೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಗರದ ಪಡುವಾರಹಳ್ಳಿಯ  ಬಾಬು ಜಗಜೀವನರಾಂ ಭವನದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಸೆಕ್ಷನ್ 24 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ  ಮಾನ್ಯುಯಲ್ ಸ್ಕ್ಯಾವೆಂಜರ್‌ ಗಳು  ಇಲ್ಲ ಎಂದು ವರದಿ ಹೇಳಿದೆ. ಇದೇ ರೀತಿ ಮುಂದೆ ಯಾರೂ ಕೂಡ ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ಕೈಗೊಳ್ಳದಂತೆ ಅಧಿಕಾರಿಗಳು ಗಮನಹರಿಸಲು ಸೂಚಿಸಿದರು.

ಜಿಲ್ಲೆಯಾದ್ಯಂತ ಇರುವ ಪುರಸಭೆ ನಗರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಸತಿ ಮತ್ತು ನಿವೇಶನ ಒದಗಿಸುವ ಬಗ್ಗೆ ಹಾಗೂ ಗ್ರಾಮಾಂತರ ಭಾಗದಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಒದಗಿಸಿ ಕೊಡುವಂತೆ ಸೂಚಿಸಿದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಶೇಕಡ 20ರಷ್ಟು ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸೂಚಿಸಿದ ಜಿಲ್ಲಾಧಿಕಾರಿಗಳು ನಿತ್ಯ ಜೀವನದಲ್ಲಿ ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹುಮುಖ್ಯವಾಗಿರುವುದರಿಂದ ಅವರಿಗೆ ವಿಶೇಷ ಗೌರವ ನೀಡಿ ಕಾಲಕಾಲಕ್ಕೆ ದೊರೆಯುವ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ವಸತಿರಹಿತ ಪೌರಕಾರ್ಮಿಕರಿಗೆ ಹಾಗೂ ಸ್ವಚ್ಛತಾಗಾರರಿಗೆ ನಿವೇಶನಕ್ಕಾಗಿ ಜಮೀನನ್ನು ಗುರುತಿಸಿದ್ದು ಆದಷ್ಟು ಬೇಗ ನಿವೇಶನ ನೀಡಲು ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿ ವಸತಿ ಸೌಲಭ್ಯ ಕಲ್ಪಿಸುವಲ್ಲಿ ಕ್ರಮವಹಿಸಬೇಕೆಂದು  ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್, ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: