ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.
ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.
ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…