ಮೈಸೂರು

ಮೈಸೂರು: ಆಗಸ್ಟ್ 9ರಂದು‌ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟ ಪ್ರದರ್ಶನ

ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು‌ ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.

ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.

ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್‌ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

3 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago