395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್
ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹೇಳಿದ್ದಾರೆ.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಟೇಷನ್ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲಿದೆ. ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ಯೋಜನೆ ರೂಪಿಸಲಾಗಿದೆ’ ಎಂದರು.
ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್‌ಗಳನ್ನು ನಿರ್ಮಿಸಲಾಗುವುದು.
ಮೈಸೂರು ರೈಲು ನಿಲ್ದಾಣವು ಎನ್‌ಎಸ್‌ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತಿವೆ. ಇವು ಮೈಸೂರು ನಗರಕ್ಕೆ ಹೊಸದಿಲ್ಲಿ, ಪಟನಾ, ಮುಂಬಯಿ, ಕೂಚಿಕುಡಿ, ಚೆನ್ನೈ, ತಿರುಪತಿ, ತಿರುವನಂತಪುರಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳು, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ,” ಎಂದು ಮಾಹಿತಿ ನೀಡಿದರು.
“ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60 ಸಾವಿರ ಪ್ರಯಾಣಿಕರ ಸಂಚಾರವಿದ್ದು, ನಿತ್ಯ ಸುಮಾರು 21-25 ಲಕ್ಷ ರೂ. ಆದಾಯ ಗಳಿಸುತ್ತದೆ. ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗ ಜನ ಸ್ನೇಹಿ ಕೂಡ ಆಗಿದೆ,” ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೆ ನೌಕರ ಎಚ್.ಎಸ್. ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.
ಮುದಿತ್ ಮಿತ್ತಲ್ ಅವರು ವೇದಿಕೆ ಕಾರ್ಯಕ್ರಮದ ನಂತರ ಪರಂಪರೆ ಗ್ಯಾಲರಿ ಹಾಗೂ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕ ತಿಕ ಕಾರ್ಯಕ್ರಮ ನೀಡಿದರು.
ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಜಡ್‌ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೆ ಸಿಬ್ಬಂದಿ ಇದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…