Mysore
22
overcast clouds
Light
Dark

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ 13 ಕ್ಕೆ

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ ಕೆಳಗಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು,ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು (Consumer Disputes), ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬoಧಿಸಿದ ಸೇವಾ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತತೆ ಸೇವೆಗಳ ಸಂಬoಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ/ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ) ಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧ್ಯವವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (ಮೈಸೂರು ನಗರಕ್ಕೆ ಸಂಬoಧಿದoತೆ ಮಾತ್ರ) ದೂ.ಸಂ:1800-425-0131 ಹಾಗೂ ತಾಲ್ಲೂಕುಗಳಿಗೆ ಸಂಬoಧಿಸಿದoತೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.