ಮೈಸೂರು: ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, ಜೇನು ಕುರುಬ ಹಾಗೂ ಸೋಲಿಗ ಸಮುದಾಯದವರ ಕುಂದು-ಕೊರತೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಎಸ್.ಸಿ, ಎಸ್.ಟಿ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ನೀಡಿದೆ. ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದಕ್ಕಾಗಿ ಶಿಕ್ಷಣ ಪಡೆದುಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೆ ಶಾಲೆಗೆ ಸೇರಿಸಿಕೊಳ್ಳುವ ಅವಕಾಶ ನೀಡಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊದಲ ಬಾರಿ ಸಿಎಂ ಆಗಿದ್ದಾಗಲೇ ಅಲೆಮಾರಿ ಸಮುದಾಯಗಳನ್ನು ಮೇಲೆತ್ತುವ ಸಲುವಾಗಿ ಅಲೆಮಾರಿ ಕೋಶ ಮಾಡಿ, ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ರಕ್ಷಣೆ ನೀಡುತ್ತಿದೆ. ದೌರ್ಜನ್ಯಗಳು ನಡೆದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ, ಪೊಲೀಸರಿಗೆ, ನಿಗಮಕ್ಕೆ ಮಾಹಿತಿ ನೀಡುವಂತೆ ಹೇಳಿದರು.
ಮೈಸೂರು ಪ್ರವಾಸ ವೇಳೆ ಅಲೆಮಾರಿಗಳ ಸಮುದಾಯಗಳಿಂದ ಸಮುದಾಯಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ಹುಣಸೂರು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ದೊಂಬರ ಕಾಲೋನಿಯಲ್ಲಿ ೨೨ ಕುಟುಂಬಗಳಿದ್ದು, ೫೦ ವರ್ಷಗಳ ನಂತರ ಮನೆ ಹಕ್ಕು ಪತ್ರ ನೀಡಲಾಗಿದೆ. ಸ್ಮಶಾನವಿಲ್ಲದೆ ಅಂತ್ಯಕ್ರಿಯೆ ನಡೆಸಲು ಪರದಾಡುತಿದ್ದೇವೆ. ರಸ್ತೆ-ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಯಿತು.
ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್(ಕೊಪ್ಪ ಸಮೀಪ) ಬಳಿ ವಾಸವಿರುವ ಜೇನು ಕುರುಬ ಮತ್ತು ಸೋಲಿಗ ಸಮುದಾಯದವರಿಂದಲೂ ಸಮಸ್ಯೆಗಳ ಮನವಿಯನ್ನು ಸ್ವೀಕರಿಸಲಾಯಿತು.
ಈ ವೇಳೆ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ.ಭಜಂತ್ರಿ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಆನಂದ್‌ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ರಂಗಸ್ವಾಮಿ, ನೌಕರರ ಘಟಕದ ಎನ್.ರವಿಕುಮಾರ್, ದಸಂಸ ಮುಖಂಡ ನಿಂಗರಾಜ್ ಮಲ್ನಾಡಿ, ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಅಧ್ಯಕ್ಷ ಮುತ್ತುರಾಜ್, ಎಸ್‌ಸಿ, ಎಸ್‌ಟಿ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ರವಿಕುಮಾರ್ ಎನ್.ಕೊಡಗಳ್ಳಿ, ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…